
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ಜತೆಗೆ ಅಹಿಂದ ಸಂಘಟನೆಯ ಮೇಲೂ ಪರಿಣಾಮ ಬೀರಲಿದೆ. ಅಹಿಂದ ಸಮುದಾಯದಲ್ಲಿ ಕಾಂಗ್ರೆಸ್ನ ಪ್ರಭಾವ ಕುಂದುವ ಸಾಧ್ಯತೆಯಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಅಗತ್ಯವಿಲ್ಲ ಎಂಬುದಾಗಿ ನಾನು ಅವರಿಗೆ ತಿಳಿಸಿದ್ದೇನೆ ಎಂದು ರಾಜಣ್ಣ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಲವು ಬಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

























































































