
ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕರಾವಳಿ ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ ಬೆಳಗಾವಿ, ಬೀದರ್, ಧಾರವಾಡ ,ಗದಗ, ಹಾವೇರಿ ,ಕಲಬುರಗಿ ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ನ. 26ರಂದು ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

























































































