25.7 C
Udupi
Thursday, November 26, 2026
spot_img
spot_img
HomeBlogಕಲೆ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಗೆ ಸತೀಶ್ ಶೆಟ್ಟಿ ಬೋಳ ಅವರಿಗೆ ,"ಕಲಾಭೂಮಿ ರಾಜ್ಯೋತ್ಸವ -...

ಕಲೆ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಗೆ ಸತೀಶ್ ಶೆಟ್ಟಿ ಬೋಳ ಅವರಿಗೆ ,”ಕಲಾಭೂಮಿ ರಾಜ್ಯೋತ್ಸವ – 2026 ಪ್ರಶಸ್ತಿ”

ನಿಟ್ಟೆ: ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಆಸಕ್ತಿ, ಸಾಧನೆ ಮತ್ತು ಬಹುಮುಖ ಸೇವೆಯನ್ನು ಗುರುತಿಸಿ, ನಿಟ್ಟೆಯ ಎನ್.ಎಂ.ಎ.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಾಯಕ ಗ್ರಂಥಪಾಲಕ ಶ್ರೀ ಸತೀಶ್ ಶೆಟ್ಟಿ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀ ಆಸ್ಕರ್ ಕೃಷ್ಣ ಅವರ ಸ್ಥಾಪಕತ್ವದ ಕಲಾಭೂಮಿ ಪ್ರತಿಷ್ಠಾನ (ರಿ.), ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ (ರಿ.) ಸಹಯೋಗದಲ್ಲಿ ನವೆಂಬರ್ 17ರಂದು ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಹಿರಿಯ ಚಲನಚಿತ್ರ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮ. ಹರೀಶ್, ಹಿರಿಯ ರಂಗಕರ್ಮಿ ಶ್ರೀಮತಿ ಗೀತಾ ಮೋಂಟಡ್ಕ, ನಟ ಹಾಗೂ ಮಿಮಿಕ್ರಿ ಕಲಾವಿದ ಮಿಮಿಕ್ರಿ ಗೋಪಿ, ಹಿರಿಯ ಪತ್ರಿಕಾ ಸಂಪಾದಕ ಡಾ. ಸಿರಿಗೆರೆ ತಿಪ್ಪೇಶ್, ಆರ್.ಜೆ. ಪ್ರದೀಪ್, ನಟ ಹಾಗೂ ನಿರ್ಮಾಪಕ ಗಣೇಶ್ ರಾವ್ ಕೇಸರ್ಕರ್, ನಟಿ ಚೈತ್ರಾ ಕೊಟ್ಟೂರು, ನಿರ್ದೇಶಕ ಸಾಯಿರಾಂ, ಹಾಸ್ಯ ಕಲಾವಿದ ಚಂದ್ರಪ್ರಭ ಜಿ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಾಣಿಜ್ಯ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಸತೀಶ್ ಶೆಟ್ಟಿ ಅವರು ಗ್ರಂಥಾಲಯ ವೃತ್ತಿಯೊಂದಿಗೆ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ವಿವಿಧ ಪತ್ರಿಕೆ ಹಾಗೂ ಮಾಧ್ಯಮಗಳಿಗೆ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ವರದಿಗಳನ್ನು ನೀಡುತ್ತಿದ್ದಾರೆ.

ತುಳು ರಂಗಭೂಮಿಯೊಂದಿಗೆ ವಿಶೇಷ ನಂಟು ಹೊಂದಿರುವ ಇವರು, 2004ರಿಂದ 2016ರವರೆಗೆ ಪತ್ರಕರ್ತ ಹಾಗೂ ಪ್ರಶಸ್ತಿ ಪುರಸ್ಕೃತ ಶ್ರೀ ವಿಲಾಸ್ ಕುಮಾರ್ ನಿಟ್ಟೆ ಅವರ ನೇತೃತ್ವದ ‘ನಮನ ಕಲಾವಿದರು, ನಿಟ್ಟೆ’ ತಂಡದಲ್ಲಿ ಪೋಷಕ ಹಾಗೂ ಹಾಸ್ಯನಟನಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ತುಳು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಸಿದ್ಧ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಇವರ ಕಲಾಯಾನದ ಸ್ಮರಣೀಯ ಅನುಭವವಾಗಿದೆ.

ವಿವಿಧ ಸಾಮಾಜಿಕ ಹಾಗೂ ಸೇವಾ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರ ಬಹುಮುಖ ಆಸಕ್ತಿ ಮತ್ತು ಸೇವೆಗೆ ಸಂದ ಈ ಗೌರವಕ್ಕೆ ಕುಟುಂಬದವರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page