
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ. ಶಾಲೆಯ ಒಂಬತ್ತನೇ ತರಗತಿಯ ಸುದೀಕ್ಷಾ ಪೂಜಾರಿ ಬೆಳ್ಳಿ ಪದಕ ಹಾಗೂ ಎಂಟನೇ ತರಗತಿಯ ಅಕ್ಷಯ್ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

























































































