
ಕಾರ್ಕಳ :ಶ್ರೀ ಶಂಕರ ವಿಜಯೋತ್ಸವ 2026 ಇದರ ಅಂಗವಾಗಿ ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಯಲ್ಲಿ ನವೆಂಬರ್ 22ರಂದು ನಡೆದ ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 10 ನೇ ತರಗತಿ ವಿದ್ಯಾರ್ಥಿ ತೇಜಸ್, ಎಂಟನೇ ತರಗತಿ ವಿದ್ಯಾರ್ಥಿನಿ ಶ್ರುತಿ ಹಾಗೂ ಏಳನೇ ತರಗತಿ ವಿದ್ಯಾರ್ಥಿನಿ ಲಕ್ಷಿತಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಭೂಷಯ್ ಹಾಗೂ ಆರನೇ ತರಗತಿ ವಿದ್ಯಾರ್ಥಿ ರೋಹಿತ್, ಗಾಯನ ಸ್ಪರ್ಧೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿ ಪ್ರದ್ಯೋತನ್, ಎಂಟನೇ ವಿದ್ಯಾರ್ಥಿನಿ ಶ್ರುತಿ ಹಾಗೂ ತನ್ವಿ ಇವರು ಭಾಗವಹಿಸಿ ಬಹುಮಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರಿಗೆ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್, ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿರುತ್ತಾರೆ.

























































































