
ಬೆಂಗಳೂರು: ಕರ್ನಾಟಕ ಸರ್ಕಾರದ ‘ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ’ಯಡಿ ವೃತ್ತಿಪರ ಕೋರ್ಸ್‌ಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ ನೀಡಲಾಗುತ್ತಿದೆ. ಉನ್ನತ ಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಇಲಾಖೆ ಈ ಯೋಜನೆಯನ್ನು ಜಾರಿಗೊಳಿಸಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಶಿಕ್ಷಣ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಈ ಯೋಜನೆಯಡಿ ಪ್ರಮುಖವಾಗಿ ಮೂರು ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
- NEET: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ
- JEE (Mains & Advanced): IIT, NIT ಸೇರಿದಂತೆ ಪ್ರಮುಖ ಎಂಜಿನಿಯರಿಂಗ್ ಸಂಸ್ಥೆಗಳ ಪ್ರವೇಶಕ್ಕೆ.
- KCET: ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ.
ವಿದ್ಯಾರ್ಥಿಗಳಿಗೆ ಪರಿಣಿತ ಉಪನ್ಯಾಸಕರಿಂದ ಲೈವ್ ಆನ್‌ಲೈನ್ ತರಗತಿಗಳು ಹಾಗೂ ನಂತರ ವೀಕ್ಷಿಸಲು ಅನುಕೂಲವಾಗುವ ರೆಕಾರ್ಡೆಡ್ ಪಾಠಗಳನ್ನು ಒದಗಿಸಲಾಗುತ್ತದೆ. ಇದರೊಂದಿಗೆ ಡಿಜಿಟಲ್ ಅಧ್ಯಯನ ಸಾಮಗ್ರಿ, ನೋಟ್ಸ್, ಪ್ರಶ್ನೆ ಕೋಶ, ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳ ವಿಶ್ಲೇಷಣೆ ಮತ್ತು ಅಣಕು ಪರೀಕ್ಷೆಗಳ ಸೌಲಭ್ಯವೂ ಇರಲಿದೆ.
ಅಲ್ಲದೆ, ಪಠ್ಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸಲು ವಿಶೇಷ ಮಾರ್ಗದರ್ಶನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಉಚಿತ ಆನ್‌ಲೈನ್ ತರಬೇತಿ ಪಡೆಯಲು ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿ:
ಹೆಚ್ಚಿನ ಮಾಹಿತಿಗಾಗಿ 080-24410574 ಸಹಾಯವಾಣಿಯನ್ನು ಸಂಪರ್ಕಿಸಬಹುದು. ಈ ಸೇವೆ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಲಭ್ಯವಿದ್ದು, ಸರ್ಕಾರಿ ರಜಾದಿನಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ.

























































































