29.3 C
Udupi
Sunday, November 29, 2026
spot_img
spot_img
HomeBlogಪಡಿತರ ಅಕ್ಕಿಯ ಬದಲು ಆಹಾರ ಧಾನ್ಯಗಳ ಕಿಟ್ ವಿತರಣೆ: ಸಚಿವ ರಿಜ್ವಾನ್ ಅರ್ಷದ್

ಪಡಿತರ ಅಕ್ಕಿಯ ಬದಲು ಆಹಾರ ಧಾನ್ಯಗಳ ಕಿಟ್ ವಿತರಣೆ: ಸಚಿವ ರಿಜ್ವಾನ್ ಅರ್ಷದ್

ರಾಯಚೂರು: ನಗರದಲ್ಲಿ ಮಾತನಾಡಿದ ಸಚಿವ ರಿಜ್ವಾನ್ ಅರ್ಷದ್ ಅಕ್ಕಿ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಇರುವ ಹಿನ್ನೆಲೆಯಲ್ಲಿ, ಫಲಾನುಭವಿಗಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಹಿತದೃಷ್ಟಿಯಿಂದ ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳ ಕಿಟ್ ವಿತರಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈವರೆಗೆ 5,000 ಟನ್ ಅಕ್ಕಿ ವಶಪಡಿಸಿಕೊಂಡಿದ್ದು, 415 ಪ್ರಕರಣ ದಾಖಲಿಸಿ, 285 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಪಡಿತರ ಅಕ್ಕಿಯ ಕಾಳಸಂತೆ ವ್ಯಾಪಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಗಡಿಭಾಗಗಳಲ್ಲಿ ಈ ದಂಧೆಯಲ್ಲಿ ತೊಡಗಿರುವವರು ತಕ್ಷಣವೇ ಹಿಂದೆ ಸರಿಯಬೇಕು. ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದರು.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಹಾಗೂ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸುವುದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿಗಳ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲಾಗಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಿದೆ ಎಂದು ತಿಳಿಸಿದರು.

ಗ್ರಾಹಕರಿಗೆ ನಿಗದಿತ ತೂಕದ ಹಾಗೂ ಗುಣಮಟ್ಟದ ಸರಕುಗಳು ದೊರೆಯುವುದನ್ನು ಖಚಿತಪಡಿಸುವುದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕರ್ತವ್ಯವಾಗಿದೆ. ಇಲಾಖೆಯ ಕಾರ್ಯನಿರ್ವಹಣೆಯಲ್ಲಿನ ಲೋಪದೋಷಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page