
ಕೊಪ್ಪಳ: ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ , ಜಿಲ್ಲಾಧಿಕಾರಿ ಜನಸ್ಪಂದನಾ ಕಾರ್ಯಕ್ರಮ ನಡೆದಿದ್ದು ಯುವಕನೋರ್ವ ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ ಎಂದು ಮನವಿ ಸಲ್ಲಿಸಿದ ವಿಡಿಯೋ ವೈರಲ್ ಆಗಿದೆ.
ಸಂಗಪ್ಪ ಎಂಬ ಯುವಕ ಇಂದು ಜಿಲ್ಲಾಧಿಕಾರಿ ನಲೀನ್ ಅತುಲ್ ರವರಿಗೆ ನಾನು ಕ್ರಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದೇನೆ. ಆದರೆ ಇಲ್ಲಿಯವರೆಗೆ ಯಾವುದೇ ಹುಡುಗಿ ಮದುವೆಯಾಗಲು ಒಪ್ಪುತ್ತಿಲ್ಲ. ಆದ್ದರಿಂದ ಮಾನಸಿಕವಾಗಿ ನೊಂದಿದ್ದೇನೆ . ಸರಕಾರದಿಂದ ರೈತರ ಮಕ್ಕಳ ಬಾಳು ಬೆಳಗಲು ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾನೆ. ಜಿಲ್ಲಾಧಿಕಾರಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಅರ್ಜಿ ಪಡೆದುಕೊಂಡಿದ್ದು ಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.



















































