
ನವದೆಹಲಿ: ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಮಹತ್ವದ ತೀರ್ಪು ನೀಡಿದೆ.
ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ. ಜೀವನಾಂಶ ದಾನವಲ್ಲ, ವಿವಾಹಿತ ಮಹಿಳೆಯರ ಹಕ್ಕು ಎಂದು ಸ್ಪಷ್ಟಪಡಿಸಿದೆ.





