
ನೆಲಮಂಗಲ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೇ ಬರೀ ಲೂಟಿ ಮಾಡುವುದೇ ಕೆಲಸ ಆಗಿದೆ ಎಂದು ವ್ಯಂಗ್ಯವಾಡಿದರು.
ನಮ್ಮ ಮೇಲೆ ಪೊಲೀಸರಿಂದ ದೌರ್ಜನ್ಯ ಮಾಡಿಸಿ ಕಾಂಗ್ರೆಸ್ ಗೂಂಡಾ ಕೆಲಸ ಮಾಡುತ್ತಿದೆ. ಬಿಜೆಪಿ ಪ್ರತಿಭಟನೆಗೆ ರಾಜ್ಯ ಸರ್ಕಾರ ಗಢಗಢ ನಡುಗಿದ್ದು ಹೋರಾಟದ ಫಲವಾಗಿ ಒಂದು ವಿಕೆಟ್ ಬಿದ್ದಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದು ಇದು ಕರ್ನಾಟಕದ ಇತಿಹಾಸದಲ್ಲೇ ಸರ್ಕಾರಕ್ಕೆ ಅಂಟಿದ ಎರಡು ಕಪ್ಪು ಚುಕ್ಕೆಗಳಾಗಿವೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.





