
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ದುಷ್ಕರ್ಮಿಗಳು ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ತುಂಬಿಸಿ ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಬೆಂಕಿ ಹಚ್ಚಿದ ಪರಿಣಾಮ ತಾಯಿ ಜೈಬಾನ್ (55), ಮತ್ತು ಮಗಳು ಶಬಾನ್ (25) ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಹಾಲಿಂಗಪುರ ಪೊಲೀಸರು ಶ್ವಾನ ದಳ ಮೂಲಕ ಸ್ಥಳ ಪರಿಶೀಲನೆ ನಡೆಸಿದ್ದಾರೆ.


















































































