
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿ ಕೂತಿರುವ ಖಚಿತ ಮಾಹಿತಿಯ ಮೇರೆಗೆ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಸಿಬ್ಬಂದಿಗಳು ಸೋಮವಾರ ಸಂಜೆ ದೋಡಾ ಪಟ್ಟಣದಿಂದ ಸುಮಾರು 55 ಕಿಮೀ ದೂರದಲ್ಲಿರುವ ದೇಸಾ ಅರಣ್ಯ ವಲಯದ ಧರಿ ಗೋಟೆ ಉರರಬಾಗಿಯಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
20 ನಿಮಿಷಕ್ಕೂ ಹೆಚ್ಚಿನ ಕಾಲ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.


















































































