27.4 C
Udupi
Sunday, April 12, 2026
spot_img
spot_img
HomeBlogತೀವ್ರ ಮಳೆಯ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ತೀವ್ರ ಮಳೆಯ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಚಿಕ್ಕಮಗಳೂರು: ಶೃಂಗೇರಿ, ನರಸಿಂಹರಾಜಪುರ, ಮೂಡಿ ಗೆರೆ, ಕಳಸ ಕುದುರೆಮುಖ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಜು.22ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು ಇಲ್ಲಿಗೆ ತೆರಳುವ ಮಾರ್ಗ ಕಿರಿದಾಗಿದ್ದು ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಅಗತ್ಯ ವಾಹನಗಳನ್ನು ಹೊರತುಪಡಿಸಿ ಹೊರಗಿನಿಂದ ಬರುವ ವಾಹನಗಳಿಗೆ ಜು.22ರ ವರೆಗೆ ನಿರ್ಬಂಧ ವಿಧಿಸಿದೆ ಎಂದು ಆದೇಶ ಹೊರಡಿಸಿದ್ದಾರೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page