
ಕರಾವಳಿಯಲ್ಲಿ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದೆ. ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.








