
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಿದ್ದು ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನದಲ್ಲಿ ಸಿಎಂ ಅವರು ಕೋಟ ಅವರ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಸುಮ್ಮನೆ ರಾಜಕೀಯಕ್ಕಾಗಿ ಆರೋಪ ಮಾಡುವ ಜಾಯಮಾನದವರಲ್ಲ. ಅವರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ, ಪಕ್ಕಾ ಮಾಹಿತಿ ಇದ್ದರೆ ಮಾತ್ರ ಆರೋಪ ಮಾಡುತ್ತಾರೆ ಎಂದು ಸಿಎಂ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ.
ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಉತ್ತರ ಕೊಡುವಂತೆ ಕೋಟ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ, ಸಿದ್ದರಾಮಯ್ಯ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು.








