
ಬೆಂಗಳೂರು: ಇಲಾಖೆಗೆ ಸಂಬಂಧಿಸಿದ ಯಾವುದೇ ವಿಷಯಗಳ ಕುರಿತು ಇಲಾಖೆ ಸಮವಸ್ತ್ರದಲ್ಲಿ ಫೋಟೋ ವಿಡಿಯೋ ಅಥವಾ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡದಂತೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೂಚನೆ ನೀಡಿದ್ದಾರೆ.
ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ಇಲಾಖೆಯ ನಿಯಮ ಮತ್ತು ಪಾಲನೆಯ ವಿರುದ್ಧವಾಗಿದೆ. ಪೋಲಿಸ್ ಸಮವಸ್ತ್ರವು ಪೊಲೀಸರ ಬದ್ಧತೆ ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ ಆದ್ದರಿಂದ ಸಮವಸ್ತ್ರದಲ್ಲಿರುವ ಫೋಟೋ ರೀಲ್ಸ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡದಂತೆ ಎಚ್ಚರಿಸಿದ್ದಾರೆ. ಇನ್ನಾಗಿಯೂ ಆಸ್ಪತ್ರೆ ಯಾವುದೇ ಲೋಪ ಕಂಡು ಬಂದಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚಿಸಲಾಗಿದೆ.








