31.9 C
Udupi
Monday, April 13, 2026
spot_img
spot_img
HomeBlogಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ

ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು: ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ‌ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ ಪ್ರವೇಶಕ್ಕೆ ನಿಷೇಧ ಹೇರಿದೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜುಲೈ 31ರ ವರೆಗೂ ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೊಂಚ ಮಳೆ ವಿರಾಮ ನೀಡಿದ್ದು ಒಂದು ವಾರಗಳ‌ ಕಾಲ ಸುರಿದ ಮಳೆ‌ ವಾಡಿಕೆ‌ ಪ್ರಮಾಣದ 25% ಅಷ್ಟು ಹೆಚ್ಚಿದ್ದು ಗಾಳಿ ಸಹಿತ ಸುರಿದ ಮಳೆ ಒಂದೇ ವಾರಕ್ಕೆ ನೂರು ಕೋಟಿ ನಷ್ಟ ಮಾಡಿದೆ. ರಾಜ್ಯದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದು ಪ್ರತಿ ದಿನ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ರಾಜ್ಯ, ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಆದರೆ ಇದೀಗ, ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದು, ಬೃಹತ್ ಗಾತ್ರದ ಕಲ್ಲು, ಮಣ್ಣು, ಮರ ರಸ್ತೆಗೆ ಬಿಳುತ್ತಿವೆ. ಹೀಗಾಗಿ ಕೈಮರ ಚೆಕ್ಪೋಸ್ಟ್ ಬಳಿ ಗೇಟ್ ಬಂದ್ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page