31.1 C
Udupi
Monday, April 13, 2026
spot_img
spot_img
HomeBlogಕ್ರೈಸ್ಟ್ ಕಿಂಗ್: ವಿಜ್ಞಾನ ವಿಷಯಗಳಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕ್ರೈಸ್ಟ್ ಕಿಂಗ್: ವಿಜ್ಞಾನ ವಿಷಯಗಳಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಪೂರ್ಣಾಂಕ ಪಡೆದ ಉಡುಪಿ ಜಿಲ್ಲೆಯ ನಾಲ್ವರಲ್ಲಿ, ಇಬ್ಬರು ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು


ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾ ರಸಾಯನಶಾಸ್ತ್ರಉಪನ್ಯಾಸಕರ ವೇದಿಕೆ ವತಿಯಿಂದ ಸನ್ಮಾನ ಮಾಡಲಾಯಿತು.

ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಸ್ಮಿತಾ ಡಿ’ಮೆಲ್ಲೊ, (ಪಿಸಿಎಂಬಿ), ಅಂಕಿತ್ ಸುಧಾಳ (ಪಿಸಿಎಂಸಿ) ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿರುವುಲ್ಲದೆ ರಾಜ್ಯಮಟ್ಟದಲ್ಲಿ ಕ್ರಮವಾಗಿ ಆರು ಮತ್ತು ಎಂಟನೇ ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಮಾತ್ರ ವಿಜ್ಞಾನದ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದು ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಉಡುಪಿಯ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ನಡೆದ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರದಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page