
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಕೈಗಾರಿಕಾ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೋಡುರಸ್ತೆಯ ಬೋಳ ರಾಘವೇಂದ್ರ ಕಾಮತ್ & ಸನ್ಸ್ ಗೇರುಬೀಜ ಫ್ಯಾಕ್ಟರಿಗೆ ಭೇಟಿ ನೀಡಿ ಗೇರುಬೀಜ ಸಂಸ್ಕರಣಾ ವಿಧಾನಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಉಪನ್ಯಾಸಕರಾದ ಸುಕನ್ಯಾ ಜೈನ್, ಕು.ಅಭಿನಯ, ದೈಹಿಕ ಶಿಕ್ಷಣ ನಿರ್ದೇಶಕರಾದ ಕೃಷ್ಣಪ್ರಸಾದ್ ಅವರು ಭೇಟಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.











