ಪೆನ್ ಡ್ರೈವ್ ನಲ್ಲಿರುವ ವಿಡಿಯೋಗಳು ಅಸಲಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೆನ್ ಡ್ರೈವ್ ನಲ್ಲಿರುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು ಅಸಲಿ ಎಂದು ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಹಿರಂಗಪಡಿಸಿದೆ.
ವಿಡಿಯೋಗಳಿಗೆ ಯಾವುದೇ ಅನಿಮೇಷನ್, ಗ್ರಾಫಿಕ್ಸ್ ಬಳಸಲಾಗಿಲ್ಲ, ಎಲ್ಲಾ ವಿಡಿಯೋಗಳು ಅಸಲಿ ವಿಡಿಯೋಗಳು ಎಂದು ಎಫ್ ಎಸ್ ಎಲ್ ವರದಿಯಲ್ಲಿ ದೃಢಪಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇವರ ಮೇಲೆ, ಮಹಿಳೆಯರ ಅತ್ಯಾಚಾರ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಇದೀಗ ಎಫ್ ಎಸ್ ಎಲ್ ವರದಿ ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಆದರೆ ವಿಡಿಯೋದಲ್ಲಿ ವ್ಯಕ್ತಿಯ ಮುಖ ಕಾಣದಿರುವ ಕಾರಣ ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂದಿಸಲ್ಪಟ್ಟಿರುವ ವ್ಯಕ್ತಿಗೂ ಹೋಲಿಕೆ ಮಾಡಿ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ.













