
ಬೆಂಗಳೂರು: ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಬಿಜೆಪಿ ಹಾಗೂ ಜೆಡಿಎಸ್ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದರ ಕುರಿತು ಪ್ರತಿಕ್ರಿಯಿಸಿ ತಮಗೆ ಈ ಬಗ್ಗೆ ಮಾಹಿತಿ ಇಲ್ಲ. ಯಾರೂ ವಿನಂತಿ ಮಾಡಿಲ್ಲ. ನಗರದಲ್ಲಿ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹೈಕೋರ್ಟ್ ಆದೇಶದ ಅನ್ವಯ ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರೂ ಬಂದು ಇದುವರೆಗೆ ಅನುಮತಿ ಕೇಳಿಲ್ಲ ಎಂದು ಅವರು ಹೇಳಿದರು.













