
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಯೋಗ ಮತ್ತು ಕೌಶಲ್ಯ ತರಬೇತುದಾರ ಚಂದನ್ ರಾವ್ ಅವರು ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾತನಾಡಿದ ಅವರು “ನಮ್ಮ ಸುತ್ತ ನಕಾರಾತ್ಮಕ ಸಂಗತಿಗಳು ಸುತ್ತುತ್ತಿರುತ್ತವೆ. ಆದರೆ ನಾವು ಯಾವಾಗಲೂ ಧನಾತ್ಮಕವಾಗಿ ಯೋಚನೆ ಮಾಡಬೇಕು. ನಾಳೆಗಳಿಗೆ ಕಾಯದೆ ಜೀವನದಲ್ಲಿ ಇಂದು ಬರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಶಸ್ಸಿನ ಬೆನ್ನು ಹತ್ತಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ” ಎಂದು ಹೇಳಿ ಸಿಎ, ಸಿಎಸ್ ಪರೀಕ್ಷೆಗಳಿಗೆ ಮಾಡಬೇಕಾದ ತಯಾರಿ ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಸಿಎ, ಸಿಎಸ್ ಸಂಯೋಜಕರಾದ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಉದಯಶ್ರೀ, ಅರ್ಥಶಾಸ್ತ್ರ ಉಪನ್ಯಾಸಕಿ ಕು.ಅಭಿನಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಕನ್ಯಾ ಜೈನ್ ಅತಿಥಿಗಳನ್ನು ಪರಿಚಯಿಸಿ ದೀಪಕ್
ವಂದಿಸಿದರು.













