
ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ ಬಿಜೆಪಿ-ಜೆಡಿಎಸ್‌ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ, ಅದು ಅವರ ಪಾಪ ವಿಮೋಚನಾ ಯಾತ್ರೆ. ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಗ್ಯಾರಂಟಿ ಯೋಜನೆ ನಿಲ್ಲಿಸಿ ಸರ್ಕಾರ ಉರುಳಿಸುವುದು ಅವರ ಉದ್ದೇಶ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸುವುದು ಅವರ ಹಣೆಯಲ್ಲೇ ಬರೆದಿಲ್ಲ ಎಂದು ತಿರುಗೇಟು ನೀಡಿದರು.













