
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ಇದುವರೆಗೂ ಅರ್ಜಿ ಸಲ್ಲಿಸದ ಹಾಗೂ ಯುಜಿನೀಟ್-24 ರಲ್ಲಿ ಅರ್ಹತೆ ಪಡೆದವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ತನ್ನ ವೆಬ್ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿ ಅವಕಾಶ ಒದಗಿಸಿದೆ.
ಆಗಸ್ಟ್ 9ರ ಒಳಗೆ ರಾಜ್ಯ ಮತ್ತು ಹೊರ ರಾಜ್ಯದ ಅರ್ಹ ಅಭ್ಯರ್ಥಿಗಳು ಮಾತ್ರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅದರ ನಂತರ ಬರುವವರಿಗೆ ಅವಕಾಶ ಇರುವುದಿಲ್ಲ. ಕೆಇಎ ವೆಬ್ ಪೋರ್ಟಲ್ನಲ್ಲಿ ಯುಜಿನೀಟ್-24ಕ್ಕೆ ಹೊಸದಾಗಿ ನೋಂದಣಿ ಮಾಡುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ಸೂಚಿಸಿದ್ದಾರೆ













