ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಹೈಕೋರ್ಟ್ ಕಿಡಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಸಾರ್ವಜನಿಕ ಸಭೆಯಲ್ಲಿ ಹೇಳಿದ ಹೇಳಿಕೆಯ ವಿರುದ್ಧ ಇದೀಗ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಶಾಸಕ ಸುನಿಲ್ ಕುಮಾರ್ ಪ್ರಮೋದ್ ಮುತಾಲಿಕ್ ವಿರುದ್ಧ ಟೈಗರ್ ಗ್ಯಾಂಗ್, ಗೋಕಾಕ್ ಎಂದೆಲ್ಲಾ ಪದ ಬಳಕೆ ಮಾಡಿದ್ದು ಇದರ ವಿರುದ್ಧ ಪಕ್ಷೇತರ ಅಭ್ಯರ್ಥಿ ಮುತಾಲಿಕ್ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ವಿಚಾರಣೆಯ ವೇಳೆ ಹೈಕೋರ್ಟ್ ಶಾಸಕರು ಎಂದ ಕ್ಷಣ ಏನು ಬೇಕಾದರೂ ಮಾತನಾಡಬಹುದೇ, ಶಾಸಕರಾದವರು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದೆ. ಇನ್ನು ತನ್ನ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ ವಾರೆಂಟ್ ಪ್ರಶ್ನಿಸಿ ಶಾಸಕ ವಿ. ಸುನಿಲ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶಾಸಕರ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಗುರುವಾರ ವಿಚಾರಣೆ ನಡೆಸಿದರು.
ಇದೆ ವೇಳೆ ಶಾಸಕರ ಪರ ಹಾಜರಿದ್ದ ಹೈಕೋರ್ಟ್ ವಕೀಲ ಎಂ ವಿನೋದ್ ಕುಮಾರ್ ವಿಚಾರಣಾ ನ್ಯಾಯಾಲಯದಲ್ಲಿ ನಿಗದಿತ ದಿನದಂದು ವಿಚಾರಣೆ ಹಾಜರಾಗಿಲ್ಲ ಎಂದು ಅರ್ಜಿದಾರರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ. ಆದರೆ ಅದೇ ದಿನ ಪಕ್ಷದ ಕಾರ್ಯಕ್ರಮ ನಿಗದಿಯಾದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದರು.













