
ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ, ಸರಕಾರಿ ಪ್ರೌಢಶಾಲೆ ಅಜ್ಜರಕಾಡು ಉಡುಪಿ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಷಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಭೂಮಿ 100 ಮೀ ಫ್ರೀ ಸ್ಟೈಲ್ ನಲ್ಲಿ ಪ್ರಥಮ, 100 ಮೀ ಬಟರ್ಫ್ಲೈನಲ್ಲಿ ಪ್ರಥಮ, 100ಮೀ ವೈಯಕ್ತಿಕ ಮಿಡ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ ಹಾಗೂ 8ನೇ ತರಗತಿ ವಿಧ್ಯಾರ್ಥಿನಿಯಾದ ಯಶ್ವಿ ಬಿ ಹೆಚ್ 50 ಮೀ ಫ್ರೀ ಸ್ಟೈಲ್ ನಲ್ಲಿ ಪ್ರಥಮ, 100ಮೀ ಫ್ರೀ ಸ್ಟೈಲ್ ನಲ್ಲಿ ಪ್ರಥಮ, 100ಮೀ ವೈಯಕ್ತಿಕ ಮಿಡ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿಧ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.























































































