
ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕಾರ್ಕಳ ವಲಯ ಮತ್ತು ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆ ಮುದ್ರಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024 – 25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕು. ಅನ್ವಿ. ಹೆಚ್. ಅಂಚನ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಇವಳು ಕಾರ್ಕಳದ ಹರೀಶ್ ಅಂಚನ್ ಮತ್ತು ಶೋಭಾ ಹರೀಶ್ ಅಂಚನ್ ದಂಪತಿಗಳ ಪುತ್ರಿಯಾಗಿದ್ದಾಳೆ. ಇವಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದ್ದಾರೆ.













