
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಇಂದು ಸಹ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಉಡುಪಿ, ದ. ಕ ದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.













