
ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಜೇಸೀಸ್ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಮಾನ್ವಿ ಡಿ ಇವರು ದ್ವಿತೀಯ ಸ್ಥಾನ ಹಾಗೂ ಅಕ್ಷಜ್ ಶೆಟ್ಟಿ ತೃತೀಯ ಸ್ಥಾನಗಳನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.













