
ಚೆಕ್ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಮಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಜೊತೆಗೆ 40.20 ಲಕ್ಷ ರೂಪಾಯಿ ದಂಡ ವಿಧಿಸಿದೆ.
2020ರ ಜೂನ್ 17ರಂದು ಪದ್ಮಜಾ ರಾವ್ ಅವರು ‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದು ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು.
ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ನಾನು ಸಾಲವನ್ನೇ ಪಡೆದಿಲ್ಲ ಎಂದು ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್ನ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಆದರೆ, ಇದಕ್ಕೆ ಸಂಬಂಧಿಸಿ ಅವರು ಕೊರ್ಟ್ನಲ್ಲಿ ಸಾಕ್ಷಿಗಳನ್ನು ಒದಗಿಸಲು ವಿಫಲರಾಗಿದ್ದಾರೆ.
ಇದೀಗ ಕೋರ್ಟ್ ತೀರ್ಪು ನೀಡಿದ್ದು ಈ ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದ್ದು ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ಕಟ್ಟಿ ಉಳಿದಂತೆ ಸಾದಾ ಕಾರಗೃಹ ಶಿಕ್ಷೆಗೆ ಗುರಿಯಾಗಿದ್ದಾರೆ.













