
ಗೂಡ್ಸ್ ವಾಹನದಲ್ಲಿ ಜನರು ಪ್ರಯಾಣಿಸಿದರೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವುದಾಗಿ ಹುಬ್ಬಳ್ಳಿಯಲ್ಲಿ ರಾಜ್ಯ ಸಂಚಾರ ಮತ್ತು ಅಪರಾಧ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಗೂಡ್ಸ್ ವಾಹನದಲ್ಲಿ ಜನರು ಪ್ರಯಾಣಿಸುವುದು ಕಾನೂನು ಬಾಹಿರವಾಗಿದೆ. ಒಂದು ವೇಳೆ ವಾಹನ ಅಪಘಾತವಾದರೆ 10 ರಿಂದ 15 ಜನ ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿರುತ್ತದೆ. ಯಾರು ಗೂಡ್ಸ್ ವಾಹನದಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಾರೋ ಅಂತವರ ಮೇಲೆ ಕೇಸ್ ದಾಖಲು ಮಾಡುತ್ತೇವೆ. ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನದ ಪರಮಿಟ್ ಕೂಡ ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ.


































