31 C
Udupi
Thursday, April 23, 2026
spot_img
spot_img
HomeBlogಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ

ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿರುವ ಕಾರಣ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದ್ದು ಪರಿಣಾಮ ಈರುಳ್ಳಿ ಬೆಲೆ ಏರಿಕೆಯಾಗಿದೆ.

ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗದೆ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು,‌ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದ್ದು ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದೆ ಎಂದು ಮಾರುಕಟ್ಟೆ ಮೂಲಗಳು ಸೂಚನೆ ನೀಡಿವೆ.

ಬುಧವಾರ ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆಮದಾಗಿದ್ದು ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್‌ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ.ಇದಲ್ಲದೆ ಬೆಳ್ಳುಳ್ಳಿ ದರ ಕೂಡ ಕೆಜಿಗೆ 400 ರೂ.ಗೆ ಏರಿಕೆಯಾಗಿದ್ದೂ ಇದಕ್ಕೂ ಅತಿವೃಷ್ಟಿಯೇ ಕಾರಣ ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page