32 C
Udupi
Thursday, November 19, 2026
spot_img
spot_img
HomeBlog'ಅಂದು ಮೋದಿ ಜೈಲಿಗೆ ಹೋಗಬೇಕಿತ್ತು, ನಮ್ಮವರೇ ತಡೆದರು': ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ

‘ಅಂದು ಮೋದಿ ಜೈಲಿಗೆ ಹೋಗಬೇಕಿತ್ತು, ನಮ್ಮವರೇ ತಡೆದರು’: ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ

ಬೆಂಗಳೂರು: ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸೋನಿಯಾ ಗಾಂಧಿ ಅವರ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನ ಕೆಲ ನಾಯಕರು ನರೇಂದ್ರ ಮೋದಿ ಜೈಲಿಗೆ ಹೋಗುವುದನ್ನು ತಡೆದಿದ್ದರು. ಅದರ ಪರಿಣಾಮವನ್ನು ಪಕ್ಷ ಈಗ ಅನುಭವಿಸುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಕೇಂದ್ರ ಕಾನೂನು ಸಚಿವರಾಗಿದ್ದ 2009ರಿಂದ 2011ರ ಅವಧಿಯ ಘಟನೆಗಳನ್ನು ನೆನಪಿಸಿಕೊಂಡ ಅವರು ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಂದಿನ ಗುಜರಾತ್ ಗೃಹ ಸಚಿವ ಅಮಿತ್ ಶಾ ವಿರುದ್ಧ ತನಿಖೆ ನಡೆಯುತ್ತಿತ್ತು. ಅವರನ್ನು ಗುಜರಾತ್‌ನಿಂದ ಹೊರಹಾಕಲಾಗಿತ್ತು. ಪ್ರಕರಣ ಬೇರೆ ರಾಜ್ಯದಲ್ಲಿ ವಿಚಾರಣೆಗೆ ಒಳಪಡಬೇಕಿತ್ತು. ಮುಂದಿನ ಸರದಿ ನರೇಂದ್ರ ಮೋದಿಯವರದ್ದಾಗಿತ್ತು ಎಂದು ಮೊಯ್ಲಿ ತಿಳಿಸಿದರು.

ಆದರೆ, ಮೋದಿ ವಿರುದ್ಧದ ವಿಚಾರಣೆ ಮತ್ತು ತನಿಖೆಯನ್ನು ಅಂದಿನ ಕಾಂಗ್ರೆಸ್ ಸರ್ಕಾರದ ಕೆಲವು ನಾಯಕರು ತಡೆದಿದ್ದರು. ಇದಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರಣರಲ್ಲ. ಪಕ್ಷದೊಳಗಿನ ಕೆಲವರ ನಿರ್ಧಾರದಿಂದಾಗಿ ಇಂದು ಕಾಂಗ್ರೆಸ್ ಸಂಕಷ್ಟ ಎದುರಿಸುವಂತಾಗಿದೆ ಎಂದು ಅವರು ಆರೋಪಿಸಿದರು.

ಪಕ್ಷದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಬಯಸಿದ ಕೆಲವು ನಾಯಕರಿಂದಾಗಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಇಲ್ಲದಿದ್ದರೆ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದನ್ನು ತಡೆಯಬಹುದಿತ್ತು ಎಂದು ಮೊಯ್ಲಿ ಅಭಿಪ್ರಾಯಪಟ್ಟರು.

ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ನಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಬಯಸಿದ್ದರು. ಪಕ್ಷ ಭವಿಷ್ಯದ ಸವಾಲುಗಳನ್ನು ಎದುರಿಸುವ ಕುರಿತು ಸಲಹೆ ನೀಡಲು ತಮ್ಮ ನೇತೃತ್ವದಲ್ಲಿ ಸಮಿತಿಯೊಂದನ್ನೂ ರಚಿಸಿದ್ದರು. ಸಮಿತಿ ನೀಡಿದ ವರದಿಯನ್ನು ಜಾರಿಗೆ ತರಲು ಸೋನಿಯಾ ಆಸಕ್ತಿ ತೋರಿದ್ದರು ಎಂದು ಹೇಳಿದರು.

ಆದರೆ, ಕೆಲವು ನಾಯಕರು ಯಥಾಸ್ಥಿತಿಯಿಂದ ಹೊರಬರಲು ಸಿದ್ಧರಿರಲಿಲ್ಲ. ಹೀಗಾಗಿ ಶಿಫಾರಸು ಮಾಡಿದ ಬದಲಾವಣೆಗಳನ್ನು ಅನುಷ್ಠಾನಗೊಳಿಸುವುದು ಕಷ್ಟವಾಯಿತು. ಈ ಬದಲಾವಣೆಗಳು ಜಾರಿಯಾಗಿದ್ದರೆ ಇಂದಿನ ರಾಜಕೀಯ ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಮೊಯ್ಲಿ ತಿಳಿಸಿದರು.

ಕಾಂಗ್ರೆಸ್ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಧೈರ್ಯ ತೋರಬೇಕು. ಯಾವುದೇ ವಿಚಾರದಲ್ಲಿ ಗೊಂದಲ ಅಥವಾ ಹಿಂಜರಿಕೆ ಇರಬಾರದು. ಇಲ್ಲದಿದ್ದರೆ ರಾಜಕೀಯ ಎದುರಾಳಿಗಳು ಬಂದು ನಮ್ಮನ್ನು ಮುಗಿಸಿಬಿಡುತ್ತಾರೆ ಎಂದು ಎಚ್ಚರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page