
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಪುರುಷರಿಗೆ ಮಾತ್ರ ಸೀಮಿತವಾಗಿದ್ದು, ಮಹಿಳೆಯರನ್ನು ಪುರುಷರ ಆಸ್ತಿ ಎಂದು ಪರಿಗಣಿಸುತ್ತದೆ. ಇದು ಸಂವಿಧಾನ ವಿರೋಧಿ ಸಂಘಟನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ನಾನು ಶಿವ-ಶಕ್ತಿ ತತ್ವದಲ್ಲಿ ನಂಬಿಕೆ ಹೊಂದಿರುವುದರಿಂದಲೇ ಆರ್ಎಸ್ಎಸ್ ವಿರುದ್ಧ ಹೋರಾಡುವುದು ಅತೀವ ಸಂತಸ ನೀಡುತ್ತದೆ” ಎಂದು ಹೇಳಿದ್ದಾರೆ.
“ಆರ್ಎಸ್ಎಸ್ ಕಡೆಯ ಅನೇಕ ಮಹಿಳೆಯರು ನನ್ನ ಪರವಾಗಿದ್ದಾರೆ ಎಂಬುದು ವಿಶೇಷ” ಎಂದೂ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಆರ್ಎಸ್ಎಸ್ ಸಂಸ್ಥಾಪನಾ ದಿನದಂದೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿರುವುದು ಗಮನ ಸೆಳೆದಿದೆ.






















