26.7 C
Udupi
Sunday, November 8, 2026
spot_img
spot_img
HomeBlogಅರಮನೆ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

ಅರಮನೆ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಚಿವ ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ‘ಮಹಾರಾಜರು ಅರಮನೆಯನ್ನು ನಿರ್ಮಿಸಿದ್ದು ಜನರ ತೆರಿಗೆ ಹಣದಿಂದಲೇ. ಹೀಗಾಗಿ ಎಲ್ಲವೂ ಜನರಿಗೆ ಸೇರಬೇಕು’ ಎಂದು ಹೇಳಿದ್ದಾರೆ.

ಅರಮನೆ ಖಾಸಗಿ ಸ್ವತ್ತು, ಸರ್ಕಾರ ನಿರ್ಮಿಸಿಲ್ಲ ಎಂಬ ಪ್ರಮೋದಾ ದೇವಿ ಒಡೆಯರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಸಿಂಹಾಸನ ಹಾಗೂ ಅಂಬಾರಿ ಸರ್ಕಾರಕ್ಕೆ ಸೇರಿವೆ ಎಂದು ತಾನು ಎಲ್ಲಿಯೂ ಹೇಳಿಲ್ಲ. ಅವುಗಳ ಬಳಕೆಗೆ ಬಾಡಿಗೆ ನೀಡುತ್ತೇವೆ ಎಂದಿದ್ದೆ. ಅದನ್ನೇ ಅವರು ಗೌರವಧನ ಎಂದು ಕರೆದಿದ್ದಾರೆ. ಇದರಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಸ್ಪಷ್ಟಪಡಿಸಿದರು.

ಅರಮನೆಯನ್ನು ಮಹಾರಾಜರೇ ನಿರ್ಮಿಸಿದ್ದಾರೆ ಎಂಬುದನ್ನು ಒಪ್ಪುತ್ತೇನೆ. ಆದರೆ ರಾಜಾಡಳಿತವಾಗಲಿ, ಸರ್ಕಾರವಾಗಲಿ ಜನರ ತೆರಿಗೆ ಹಣದಿಂದಲೇ ನಡೆಯುತ್ತದೆ. ಪ್ರತಿ ವರ್ಷ ರಾಜಮನೆತನದವರು ಸಹಕಾರ ನೀಡಿದ್ದಾರೆ. ಈ ಬಾರಿ ಕೆಲವು ಗೊಂದಲಗಳಾಗಿದ್ದು, ಮುಂದಿನ ದಿನಗಳಲ್ಲಿ ಸಿಎಂ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಲಿದ್ದಾರೆ ಎಂದರು.

ಅರಮನೆಯಲ್ಲಿ ಜಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ಕೆಲವರ ವಿರುದ್ಧ ಕರ್ತವ್ಯ ಲೋಪದ ಆರೋಪಗಳೂ ಬಂದಿವೆ. ಸಂಪೂರ್ಣ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page