
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ
ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ
ಆಯ್ಕೆಗೊಂಡಿರುತ್ತಾನೆ. ಈತ ದಾವಣಗೆರೆಯ ಕಿರಣ್ ಕುಮಾರ್ ಹಾಗೂ ನೀಲಮ್ಮ ಪೂಜಾರಿಯವರ
ಪುತ್ರನಾಗಿರುತ್ತಾನೆ.
ಇವರನ್ನು ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.































































































































