
ಬೆಳ್ಮಣ್ಣು: ಅಕ್ಟೋಬರ್ 24ರಂದು ಇಲ್ಲಿನ ಶ್ರೀ ದುರ್ಗಾಲಕ್ಷ್ಮೀ ಬಂಟ ಮಹಿಳಾ ಸ್ವಸಹಾಯ ಸಂಘದ ದಶಮಾನೋತ್ಸವ ಸಂಭ್ರಮಾಚರಣೆ ನಡೆಯಲಿದೆ.
ನಂದಳಿಕೆಯ ಬೋರ್ಡ್ ಶಾಲೆಯಲ್ಲಿ ಮಧ್ಯಾಹ್ನ 2.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು ಸರಿತಾ ರವೀಂದ್ರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ರಶ್ಮಿ ಪಿ. ಶೆಟ್ಟಿ ಭಾಗವಹಿಸಲಿದ್ದು ಸರೋಜಿನಿ ಟಿ ಶೆಟ್ಟಿ, ರಮ್ಯಾ ಪ್ರಭಾಕರ್ ಶೆಟ್ಟಿ, ಮಮತಾ ಶೆಟ್ಟಿ ಸೇರಿದಂತೆ ಹಲವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕಲಿಕೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರಿಂದ ಮತ್ತು ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ‘ರತಿ ಕಲ್ಯಾಣ’ ಎಂಬ ಯಕ್ಷಗಾನ ಪ್ರಸಂಗ ಜರುಗಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.






















