
ಬೆಳ್ಮಣ್ಣು: ಬಂಟರ ಯಾನೆ ನಾಡವರ ಸಂಘ (ರಿ.) ಬೆಳ್ಮಣ್ಣು ವಲಯದ ವತಿಯಿಂದ ವೇದಮೂರ್ತಿ ಬಿ.ಕೆ. ವಿಜ್ಞೇಶ್ ಭಟ್ ಪೌರೋಹಿತ್ಯದಲ್ಲಿ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮ ಅಕ್ಟೋಬರ್ 25ರಂದು ಭಾನುವಾರ ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ಬೋಳ ಮಣ್ ಬೆಟ್ಟು ಬಳಿ ನಂದಳಿಕೆ “ಶ್ರೀ ಮಾತಾ” ಕೀರ್ತಿಶೇಷ ಬೋಳ ಸುಬ್ಬಯ್ಯ ವಿ. ಶೆಟ್ಟಿ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ.
ಎನ್. ಶೋಧನ್ ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು ಡಾ| ಎಂ ಮೋಹನ್ ಆಳ್ವ , ವಿಠಲಶೆಟ್ಟಿ ಬೇಲಾಡಿ, ಸದಾನಂದ ಶೆಟ್ಟಿ, ಅಜಿತ್ ಕುಮಾರ್ ರೈ ಮಾಲಾಡಿ, ಡಾ| ಕೆ ಪ್ರಕಾಶ್ ಶೆಟ್ಟಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.























