28.2 C
Udupi
Wednesday, August 12, 2026
spot_img
spot_img
HomeBlogಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಿಗೆ ಆಹಾರ ಸುರಕ್ಷತಾ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಿಗೆ ಆಹಾರ ಸುರಕ್ಷತಾ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನಗರದ ಹಲವು ಸ್ಟಾರ್ ಹೋಟೆಲ್‌ಗಳ ಅಡುಗೆಮನೆಗಳಲ್ಲಿ ಅವಧಿ ಮೀರಿದ ಆಹಾರ, ಫಂಗಸ್ ಹಿಡಿದ ತರಕಾರಿಗಳು ಹಾಗೂ ಹಾಳಾದ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೋಟೆಲ್, ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮಾರ್ಗಸೂಚಿಯಲ್ಲಿರುವ ಅಂಶಗಳು:

  • ಮಾಂಸಾಹಾರವನ್ನು 4°C ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿ ಸಂಗ್ರಹಿಸಬೇಕು.
  • ಶೀತ ಆಹಾರವನ್ನು 5°C, ಫ್ರೋಜನ್ ಆಹಾರವನ್ನು -18°C ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿ ಇರಿಸಬೇಕು.
  • ವೆಜ್ ಆಹಾರವನ್ನು 65°C ಹಾಗೂ ನಾನ್‌ವೆಜ್ ಆಹಾರವನ್ನು 70°C ತಾಪಮಾನದಲ್ಲಿ ಸಂರಕ್ಷಿಸುವಂತೆ ಸೂಚಿಸಲಾಗಿದೆ.
  • ಕಚ್ಚಾ, ಅರೆಬೆಂದ ಹಾಗೂ ಸಂಪೂರ್ಣ ಬೇಯಿಸಿದ ಆಹಾರವನ್ನು ಪ್ರತ್ಯೇಕವಾಗಿ ಇಡಬೇಕು.
  • ವೆಜ್ ಮತ್ತು ನಾನ್‌ವೆಜ್ ಆಹಾರಕ್ಕೂ ಪ್ರತ್ಯೇಕ ಸಂಗ್ರಹಣೆ ಹಾಗೂ ನಿರ್ವಹಣೆ ಕಡ್ಡಾಯವಾಗಿದೆ.
  • ತಯಾರಿಸಿದ ಆಹಾರವನ್ನು ಮರುಬಿಸಿ ಮಾಡುವಾಗ ಕನಿಷ್ಠ 75°C ತಾಪಮಾನ ಕಾಯ್ದುಕೊಳ್ಳಬೇಕು.
  • ಅಡುಗೆಗೆ ಬಳಸುವ ಎಣ್ಣೆಯ TPC ಪ್ರಮಾಣ ಶೇ.25 ಮೀರಬಾರದು.
  • ಅಲ್ಲದೆ, ಹೋಟೆಲ್‌ಗಳಲ್ಲಿ FSSAI ಅಂಗೀಕೃತ ಪ್ರಮಾಣಪತ್ರವನ್ನು ಗ್ರಾಹಕರಿಗೆ ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯ ಎಂದು ಇಲಾಖೆ ಸೂಚಿಸಿದೆ.

ಇತ್ತೀಚಿನ ತಪಾಸಣೆ ವೇಳೆ ಹಲವು ಸ್ಟಾರ್ ಹೋಟೆಲ್‌ಗಳ ಕಿಚನ್‌ಗಳಲ್ಲಿ ಅವಧಿ ಮೀರಿದ ಆಹಾರ ಹಾಗೂ ಹಾಳಾದ ಮಾಂಸ, ತರಕಾರಿ ಮತ್ತು ಹಾಲಿನ ಉತ್ಪನ್ನಗಳು ಪತ್ತೆಯಾಗಿದ್ದವು. ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳನ್ನು ಪರಿಶೀಲಿಸಲಾಗಿದ್ದು, 1,000 ಕೆಜಿಗೂ ಅಧಿಕ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಹಾರ ಸುರಕ್ಷತಾ ಇಲಾಖೆ ಸೂಚಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page