31.5 C
Udupi
Tuesday, November 17, 2026
spot_img
spot_img
HomeBlogಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯ ಪ್ರದರ್ಶನಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಕಡ್ಡಾಯ ಪ್ರದರ್ಶನಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ಪ್ರಮುಖ ಚಿಕಿತ್ಸೆಗಳು ಹಾಗೂ ವೈದ್ಯಕೀಯ ಪ್ರಕ್ರಿಯೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ಸೂಚನೆ ನೀಡಿದ್ದು, ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮುನ್ನವೇ ರೋಗಿಗಳು ಮತ್ತು ಅವರ ಕುಟುಂಬಸ್ಥರಿಗೆ ಚಿಕಿತ್ಸೆಯ ವೆಚ್ಚ ತಿಳಿಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸೆಗಳು ಹಾಗೂ ವೈದ್ಯಕೀಯ ಪ್ರಕ್ರಿಯೆಗಳ ದರಗಳನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ.

ಆಸ್ಪತ್ರೆಗಳಲ್ಲಿ ಸಾವಿರಾರು ವಿಧದ ಚಿಕಿತ್ಸೆಗಳಿರುವುದರಿಂದ ಎಲ್ಲದರ ದರಪಟ್ಟಿ ಪ್ರದರ್ಶಿಸುವುದು ಕಷ್ಟ ಎಂದು ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ತಿಳಿಸಿತ್ತು. ಇದಕ್ಕೆ ಪರಿಹಾರವಾಗಿ ಪ್ರಮುಖ ಚಿಕಿತ್ಸೆಗಳ ದರಪಟ್ಟಿಯನ್ನು ಪ್ರದರ್ಶಿಸುವುದರ ಜೊತೆಗೆ, ಉಳಿದ ಚಿಕಿತ್ಸೆಗಳ ದರಗಳನ್ನು ಒಳಗೊಂಡ ಪ್ರತ್ಯೇಕ ಬುಕ್‌ಲೆಟ್ ಸಿದ್ಧಪಡಿಸಲು ಇಲಾಖೆ ಸೂಚಿಸಿದೆ. ರೋಗಿಗಳು ಕೇಳಿದಾಗ ಅದನ್ನು ಒದಗಿಸಬೇಕು ಎಂಬ ನಿಯಮಕ್ಕೂ ಆಸ್ಪತ್ರೆಗಳ ಅಸೋಸಿಯೇಷನ್ ಒಪ್ಪಿಗೆ ನೀಡಿದೆ.

ಇನ್ನೂ ಕೆಲವು ಖಾಸಗಿ ಆಸ್ಪತ್ರೆಗಳು ದರಪಟ್ಟಿ ಪ್ರದರ್ಶಿಸದಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ನಿಯಮ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಗಿದೆ. ಅನುಷ್ಠಾನದಲ್ಲಿ ಎದುರಾಗುವ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಂತೆಯೂ ನಿರ್ದೇಶಿಸಲಾಗಿದೆ.

ಈ ಸಂಬಂಧ ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ದರಪಟ್ಟಿ ಪ್ರದರ್ಶಿಸದೆ ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಸಿದೆ.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page