26.6 C
Udupi
Wednesday, August 19, 2026
spot_img
spot_img
HomeBlogಬೆಂಗಳೂರು ನಕಲಿ ಔಷಧ ಜಾಲಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ ಎಸ್‌ಐಟಿ ರಚನೆಗೆ ಮುಂದಾದ ಸರ್ಕಾರ

ಬೆಂಗಳೂರು ನಕಲಿ ಔಷಧ ಜಾಲಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ ಎಸ್‌ಐಟಿ ರಚನೆಗೆ ಮುಂದಾದ ಸರ್ಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡೇರಿ ಸಮೀಪದ ಸಿ.ಕೆ. ತಾಂಡ್ಯಾ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ತಯಾರಿ ಜಾಲದ ತನಿಖೆ ಮುಂದುವರಿದಂತೆ ಹಲವು ಅಂಶಗಳು ಬೆಳಕಿಗೆ ಬರುತ್ತಿವೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಿಗಳಿಗೆ ಬ್ರ್ಯಾಂಡ್ ರೂಪ ನೀಡಿ, ಲೇಬಲ್ ಹಾಗೂ ಕ್ಯಾಪ್ ಅಳವಡಿಸಿ ಮಾರುಕಟ್ಟೆಗೆ ಕಳುಹಿಸಲು ಸಿದ್ಧಪಡಿಸಲಾಗುತ್ತಿತ್ತು.

ಘಟಕದಲ್ಲಿ ಔಷಧ ತಯಾರಿಕೆ ಮಾತ್ರವಲ್ಲದೆ ಪ್ಯಾಕಿಂಗ್ ಮತ್ತು ಲೇಬಲಿಂಗ್‌ಗೂ ಸಂಪೂರ್ಣ ವ್ಯವಸ್ಥೆ ಮಾಡಲಾಗಿತ್ತು. ಕೆಲವು ಔಷಧಿಗಳಲ್ಲಿ ಅವಧಿ ಮೀರಿದ ಉತ್ಪನ್ನಗಳು ಪತ್ತೆಯಾಗಿದ್ದು, ಇಂಜೆಕ್ಷನ್‌ಗಳನ್ನೂ ನಕಲಿ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಔಷಧಿಗಳು ಈಗಾಗಲೇ ಮಾರುಕಟ್ಟೆಗೆ ತಲುಪಿವೆಯೇ ಎಂಬ ಬಗ್ಗೆ FDA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ವಶಪಡಿಸಿಕೊಂಡ ಔಷಧಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಸಾಧ್ಯತೆ ಇದ್ದು, ಅವುಗಳ ಮೂಲ ಹಾಗೂ ಯಾರಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ದಂಧೆಯಲ್ಲಿ ಇನ್ನಷ್ಟು ವ್ಯಕ್ತಿಗಳು ಅಥವಾ ಸಂಸ್ಥೆಗಳು ಭಾಗಿಯಾಗಿರುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದೇ ವೇಳೆ ನಕಲಿ ಬ್ರ್ಯಾಂಡ್ ಔಷಧ ಹಾಗೂ ಕಾಸ್ಮೆಟಿಕ್ಸ್ ಜಾಲದ ತನಿಖೆಗೆ ಎಸ್‌ಐಟಿ ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸಿದ್ದಯ್ಯ ಅವರಿಗೆ ಸೇರಿದ ಫಾರ್ಮ್‌ಹೌಸ್‌ನ್ನು ದುಬೈನಲ್ಲಿರುವ ಪ್ರಶಾಂತ್ ಎಂಬುವರಿಗೆ ಲೀಸ್‌ಗೆ ನೀಡಲಾಗಿದ್ದು, ಅಲ್ಲಿ ನಕಲಿ ಔಷಧ ಘಟಕ ನಡೆಸಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಪ್ರಭುದೇವ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಬೇರೆ ರಾಜ್ಯ ಹಾಗೂ ರಾಷ್ಟ್ರಗಳಿಂದ ನಕಲಿ ಔಷಧ, ಮಾತ್ರೆಗಳನ್ನು ತಂದು ಬಹುರಾಷ್ಟ್ರೀಯ ಕಂಪನಿಗಳ ಲೇಬಲ್‌ ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಐಸಿಯುನಲ್ಲಿ ಬಳಸುವ ಔಷಧಿಗಳನ್ನೂ ನಕಲಿ ಮಾಡಿರುವುದು ಪತ್ತೆಯಾಗಿದೆ.

ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಜಾಲ ಹರಡಿರುವ ಮಾಹಿತಿ ಲಭ್ಯವಾಗಿದೆ. ನಕಲಿ ಔಷಧಿಗಳು ಯಾವ ಆಸ್ಪತ್ರೆಗಳಿಗೆ ತಲುಪಿವೆ ಹಾಗೂ ಇದರಿಂದ ಎಷ್ಟು ಮಂದಿಯ ಆರೋಗ್ಯಕ್ಕೆ ಹಾನಿಯಾಗಿದೆ ಎಂಬುದನ್ನು ಪತ್ತೆಹಚ್ಚಲು ಎಸ್‌ಐಟಿ ತನಿಖೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page