ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಕುಕ್ಕುಂದೂರಿನ ದುರ್ಗಾ ಪ್ರಾಥಮಿಕ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಬನ್ನಿಸ್ ತಂಡವು ತೃತೀಯ ಸ್ಥಾನವನ್ನು ಹಾಗೂ ಸ್ಕೌಟ್ಸ್ ತಂಡವು ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದೆ.
ವಿಜೇತ ತಂಡದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಶುಭಹಾರೈಸಿದ್ದಾರೆ.




































