
ಕಾರ್ಕಳ: ದಿನಾಂಕ ಸೆಪ್ಟೆಂಬರ್ 19 2026 ಶನಿವಾರದಂದು ಕಾರ್ಕಳದ ಕೋಟೆ ಚನ್ನಯ್ಯ ಥೀಂ ಪಾರ್ಕ್ ಆವರಣದಲ್ಲಿ ಸಂಜೆ 4:00ಗೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರಾವಳಿ ರಂಗಾಯಣ ಕಾರ್ಕಳ ಬಿ.ವಿ. ಕಾರಂತ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಿನ್ನರ ಮೇಳ ತುಮರಿ ಪ್ರಸ್ತುತಪಡಿಸುವ ‘ದಿ ಗೇಟ್’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಹೈಸ್ನಾಮ್ ತೋಂಬಾ ಅವರ ನಿರ್ದೇಶನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಕಾರಂತ್ ಅವರ ರಂಗಭೂಮಿ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.






























































































































