1,137 ರೋಗಿಗಳ ಮೇಲೆ ಲಸಿಕೆ ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು

ನವದೆಹಲಿ: ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಮೆರಿಕದ ಮಾಡೆರ್ನಾ ಹಾಗೂ ಮೆರ್ಕ್ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ಲಸಿಕೆ ಅಂತಿಮ ಹಂತದ ಪರೀಕ್ಷೆಯಲ್ಲಿ ಯಶಸ್ಸು ಕಂಡಿದೆ. ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವಲ್ಲಿ ಲಸಿಕೆ ಪರಿಣಾಮಕಾರಿ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಚರ್ಮದ ಕ್ಯಾನ್ಸರ್ ಹೊಂದಿದ್ದ 1,137 ರೋಗಿಗಳ ಮೇಲೆ ಲಸಿಕೆಯನ್ನು ಪರೀಕ್ಷಿಸಲಾಗಿತ್ತು. ರೋಗನಿರೋಧಕ ಶಕ್ತಿ ಹೆಚ್ಚಿಸುವ ಮೆರ್ಕ್‌ನ ‘ಕೀಟ್ರೂಡಾ’ ಔಷಧದೊಂದಿಗೆ ಲಸಿಕೆ ನೀಡಲಾಗಿದ್ದು, ಕ್ಯಾನ್ಸರ್ ಮರುಕಳಿಸುವ ಅಪಾಯವನ್ನು ಕಡಿಮೆ ಮಾಡಿರುವುದು ಕಂಡುಬಂದಿದೆ.
ಆರ್‌ಎನ್‌ಎ ಆಧಾರಿತ ಈ ಲಸಿಕೆಯನ್ನು ಪ್ರತಿ ರೋಗಿಯ ಟ್ಯೂಮರ್‌ಗೆ ಅನುಗುಣವಾಗಿ ಸಿದ್ಧಪಡಿಸಲಾಗುತ್ತದೆ. ಇದು ರೋಗನಿರೋಧಕ ವ್ಯವಸ್ಥೆಯನ್ನು ಸಕ್ರಿಯಗೊಳಿಸಿ ಕ್ಯಾನ್ಸರ್ ಕೋಶಗಳನ್ನು ಗುರಿಯಾಗಿಸಿ ನಾಶಪಡಿಸಲು ನೆರವಾಗಲಿದೆ. ಸದ್ಯ ಚರ್ಮದ ಕ್ಯಾನ್ಸರ್‌ಗಾಗಿ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ಮುಂದಿನ ದಿನಗಳಲ್ಲಿ ಇತರ ಕ್ಯಾನ್ಸರ್‌ಗಳಿಗೂ ವಿಸ್ತರಿಸುವ ನಿರೀಕ್ಷೆಯಿದೆ.



















































































