26.2 C
Udupi
Friday, October 23, 2026
spot_img
spot_img
HomeBlog'CJP ಸಂಘಟನೆಯನ್ನು ಎಂದಿಗೂ ಬೆಂಬಲಿಸುವುದಿಲ್ಲ': ಅಣ್ಣಾಮಲೈ

‘CJP ಸಂಘಟನೆಯನ್ನು ಎಂದಿಗೂ ಬೆಂಬಲಿಸುವುದಿಲ್ಲ’: ಅಣ್ಣಾಮಲೈ

ಚೆನ್ನೈ: ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾಕಾರರ ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡ ಪೊಲೀಸ್ ಕ್ರಮವನ್ನು ಟೀಕಿಸಿ ವಿವಾದಕ್ಕೆ ಒಳಗಾಗಿದ್ದ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ, ಆ ಸಂಘಟನೆಯನ್ನು ತಾವು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಬೆಂಬಲಿಸಿದರೂ, ತಪ್ಪು ಕಂಡಾಗ ಪ್ರಶ್ನಿಸುವುದರಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಹೊರಬಂದು ತಮ್ಮದೇ ರಾಜಕೀಯ ಉಪಕ್ರಮ ಆರಂಭಿಸಿರುವ ಅಣ್ಣಾಮಲೈ, ಗುರುವಾರ ‘ವೀ ದಿ ಲೀಡರ್ಸ್’ (We the Leaders) ಚಳುವಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. CJP ಸಂಘಟನೆಯ ಕಾರ್ಯಸೂಚಿ ಮತ್ತು ತಮ್ಮ ನಿಲುವು ವಿಭಿನ್ನವಾಗಿವೆ ಎಂದು ತಿಳಿಸಿದರು.

“ನಾವು ಕಾಕ್ರೋಚ್ ಜನತಾ ಪಾರ್ಟಿಯನ್ನು ಬೆಂಬಲಿಸುವುದಿಲ್ಲ. ಅವರ ಉದ್ದೇಶವೇ ಬೇರೆ, ನಮ್ಮ ಉದ್ದೇಶವೇ ಬೇರೆ. ಆದರೆ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಹೋರಾಟ ನಡೆಸುವ ಹಕ್ಕಿದೆ” ಎಂದು ಅಣ್ಣಾಮಲೈ ಹೇಳಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು CJP ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ಕೈಗೊಂಡ ಕ್ರಮವನ್ನು ಅಣ್ಣಾಮಲೈ ಟೀಕಿಸಿದ್ದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ವಿರುದ್ಧವೂ ಮಾತನಾಡಿದ ಅವರು, ದೇಶಭಕ್ತಿಯ ಬಗ್ಗೆ ಯಾರಿಂದಲೂ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

“ದೇಶದ ವಿವಿಧ ರಾಜ್ಯಗಳಲ್ಲಿ ವಾಸಿಸಿ, ಕೆಲಸ ಮಾಡಿದ ಅನುಭವ ನನಗಿದೆ. ಭಾರತದ ಏಕತೆ ಮತ್ತು ಸಾರ್ವಭೌಮತ್ವದ ಮಹತ್ವ ನನಗೆ ತಿಳಿದಿದೆ. ಹೀಗಾಗಿ, ದೇಶಭಕ್ತಿಯ ಬಗ್ಗೆ ಯಾರೂ ನನಗೆ ಪಾಠ ಹೇಳಬೇಕಿಲ್ಲ” ಎಂದು ಅವರು ಪ್ರತಿಪಾದಿಸಿದರು.

CJP ಕಾರ್ಯಕರ್ತರು ತಪ್ಪು ಎಸಗಿದ್ದರೆ, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ದ್ವೇಷಪೂರಿತ ಕ್ರಮಗಳ ಬದಲು ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಬೇಕು ಎಂದು ಅಣ್ಣಾಮಲೈ ಆಗ್ರಹಿಸಿದರು. ದೇಶದ ಸಾರ್ವಭೌಮತ್ವಕ್ಕೆ ಅಪಾಯವಿದ್ದರೆ ಗುಪ್ತಚರ ದಳ (IB), ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ಸೇರಿದಂತೆ ಸಂಬಂಧಿತ ಸಂಸ್ಥೆಗಳ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಭೀತಿ ಸೃಷ್ಟಿಸುವುದು ಸರಿಯಲ್ಲ ಎಂದರು.

ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ನಂತಹ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲಿನ ಜನರ ವಿಶ್ವಾಸವನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದೂ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಶ್ಲಾಘಿಸಿದ ಅಣ್ಣಾಮಲೈ, ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ, ಪ್ರಧಾನಿಯನ್ನು ಬೆಂಬಲಿಸುವುದೆಂದರೆ ಅವರ ಎಲ್ಲ ನಿರ್ಧಾರಗಳನ್ನು ಪ್ರಶ್ನಿಸದೆ ಒಪ್ಪಿಕೊಳ್ಳುವುದಲ್ಲ. ತಪ್ಪು ಕಂಡುಬಂದಾಗ ಅದನ್ನು ಪ್ರಶ್ನಿಸುವ ಹಕ್ಕು ಮತ್ತು ಜವಾಬ್ದಾರಿ ನಮಗಿದೆ ಎಂದು ಸ್ಪಷ್ಟಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page