27.5 C
Udupi
Saturday, September 12, 2026
spot_img
spot_img
HomeBlog‘ಚುನಾವಣಾ ರಾಜಕೀಯದಿಂದ ನಿವೃತ್ತಿ’ ಹೇಳಿಕೆ; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು

‘ಚುನಾವಣಾ ರಾಜಕೀಯದಿಂದ ನಿವೃತ್ತಿ’ ಹೇಳಿಕೆ; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು

ನವದೆಹಲಿ/ಕರ್ನಾಟಕ: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

‘ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಹಿನ್ನಡೆಯಾಗಬಹುದು. ಕಾಂಗ್ರೆಸ್‌ಗೆ ನಿಮ್ಮಂತಹ ಹಿರಿಯ ನಾಯಕರ ಅಗತ್ಯವಿದೆ. ಹೀಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡಬೇಡಿ’ ಎಂದು ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ತಾವು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಬಗ್ಗೆ ಮಾತ್ರ ಹೇಳಿದ್ದೇನೆ ಹೊರತು, ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವ ಮಾತು ಆಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ರಾಹುಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, 2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಈ ವೇಳೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿ, ಇನ್ನೂ ಹಲವು ವರ್ಷ ರಾಜಕೀಯದಲ್ಲಿ ಮುಂದುವರಿಯುವಂತೆ ಮನವಿ ಮಾಡಿದ್ದರು.

ನಂತರ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ 2028ರ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಸಮಸ್ಯೆಗಳಿಗೆ ಧ್ವನಿಯಾಗುವುದಾಗಿ ತಿಳಿಸಿದ್ದರು.

ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರದಲ್ಲಿದ್ದೇನೆ. ಹಿಂದೆ ಕ್ಷೇತ್ರದ ಜನರೇ ಹಣ ನೀಡಿ ಚುನಾವಣೆಯಲ್ಲಿ ಗೆಲ್ಲಿಸುತ್ತಿದ್ದರು, ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page