30.2 C
Udupi
Saturday, October 3, 2026
spot_img
spot_img
HomeBlogಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಸಾಧನೆ: ತವರಿಗೆ ಮರಳಿದ ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಸಾಧನೆ: ತವರಿಗೆ ಮರಳಿದ ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಮಂಗಳೂರು : ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪರ ಚಿನ್ನದ ಪದಕ ಗೆದ್ದ ಕ್ರೀಡಾಪಟು ಪೂವಮ್ಮ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅದ್ಧೂರಿ ಸ್ವಾಗತ ನೀಡಿದರು.

ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಮಹಿಳಾ 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿರುವ ಪೂವಮ್ಮ, ಇದು ತಮ್ಮ ಮೂರನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆ ಆರನೇ ಪದಕವಾಗಿದೆ ಎಂದು ಸಂತಸ ಹಂಚಿಕೊಂಡರು. ವೈಯಕ್ತಿಕ ವಿಭಾಗದಲ್ಲಿ ಚಿನ್ನ ಸಿಗದಿದ್ದರೂ, ತಂಡವಾಗಿ ಚಿನ್ನ ಗೆದ್ದಿರುವುದು ಹೆಮ್ಮೆಯ ವಿಚಾರ. ರಾಷ್ಟ್ರಗೀತೆ ಕೇಳುವ ಭಾಗ್ಯ ಲಭಿಸಿದ್ದು ಬಹಳ ಖುಷಿಯ ವಿಚಾರ ಎಂದು ಅವರು ಹೇಳಿದರು.

ಇದೇ ವೇಳೆ, ಕ್ರೀಡಾಪಟುಗಳಿಗೆ ನೀಡುವ ನಗದು ಬಹುಮಾನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇತರ ರಾಜ್ಯಗಳಲ್ಲಿ ಮೂರು ಕೋಟಿ ರೂಪಾಯಿಗಳವರೆಗೆ ಬಹುಮಾನ ನೀಡಿದರೆ, ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಪೂವಮ್ಮ ಒತ್ತಾಯಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page