27.4 C
Udupi
Thursday, November 5, 2026
spot_img
spot_img
HomeBlogಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್,

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್,

34, 35, 36ನೇ ಕಂತಿನ ಹಣ ಒಂದೇ ಬಾರಿ ಬಿಡುಗಡೆಗೆ ಸಿದ್ಧತೆ

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಯೋಜನೆಯ 34, 35 ಮತ್ತು 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಒಟ್ಟು ₹ 7,405.86 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಕಾಲದಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಇನ್ನೊಂದೆಡೆ, ಆರ್ಥಿಕ ಕೊರತೆಯಿಂದಾಗಿ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಸುಮಾರು ₹ 4,000 ಕೋಟಿ ಹಣ ಬಾಕಿ ಉಳಿದಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಬಜೆಟ್ ಲಭ್ಯತೆಗೆ ಅನುಗುಣವಾಗಿ ನೀಡುವ ಈ ನೆರವನ್ನು ಕಾನೂನುಬದ್ಧ ಹಕ್ಕಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಅಲ್ಲದೆ, ಮೃತಪಟ್ಟ 1.08 ಲಕ್ಷ ಫಲಾನುಭವಿಗಳ ಖಾತೆಗಳಿಗೆ ₹ 115 ಕೋಟಿ ಜಮೆಯಾಗಿರುವುದನ್ನು ಸರ್ಕಾರ ಒಪ್ಪಿಕೊಂಡಿದ್ದು ಈ ಪೈಕಿ ಈಗಾಗಲೇ ₹ 15.24 ಕೋಟಿ ಹಣವನ್ನು ವಾಪಸ್ ಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ತಿಳಿಸಿದೆ.

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಒತ್ತಾಯಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಪ್ರತಿಕ್ರಿಯಿಸಿರುವ ಸರ್ಕಾರ, ಬಾಕಿ ಉಳಿದಿರುವ ಎರಡು ತಿಂಗಳ ಹಣ ಬಿಡುಗಡೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಬಜೆಟ್ ಕೊರತೆಯಿಂದ ಅನುದಾನ ಬಿಡುಗಡೆ ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page