30.8 C
Udupi
Friday, November 6, 2026
spot_img
spot_img
HomeBlogಗೃಹಲಕ್ಷ್ಮಿ ₹ 2,000 ಹಣ ಮಹಿಳೆಯರ ಕಾನೂನುಬದ್ಧ ಹಕ್ಕಲ್ಲ: ಹೈಕೋರ್ಟ್‌ಗೆ ಸರ್ಕಾರದ ಸ್ಪಷ್ಟನೆ...!

ಗೃಹಲಕ್ಷ್ಮಿ ₹ 2,000 ಹಣ ಮಹಿಳೆಯರ ಕಾನೂನುಬದ್ಧ ಹಕ್ಕಲ್ಲ: ಹೈಕೋರ್ಟ್‌ಗೆ ಸರ್ಕಾರದ ಸ್ಪಷ್ಟನೆ…!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುವ ಮಾಸಿಕ ₹ 2,000 ಸಹಾಯಧನವನ್ನು ಫಲಾನುಭವಿಗಳು ತಮ್ಮ ಕಾನೂನುಬದ್ಧ ಹಕ್ಕು ಎಂದು ಕೇಳುವಂತಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಕಂತುಗಳನ್ನು ಬಿಡುಗಡೆ ಮಾಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಬೆಂಗಳೂರಿನ ಕಮಲಾನಗರದ ಆರ್. ಗಂಗಾ ಮತ್ತು ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಅರ್ಜಿ ಸಲ್ಲಿಸಿದ್ದು, ಸುಮಾರು 1.26 ಕೋಟಿ ಮಹಿಳೆಯರಿಗೆ ಎರಡು ತಿಂಗಳ ತಲಾ ₹ 2,000 ಸಹಾಯಧನ ಪಾವತಿಸಿಲ್ಲ ಎಂದು ಆಕ್ಷೇಪಿಸಿದ್ದರು. ಒಟ್ಟು ಸುಮಾರು ₹ 5,000 ಕೋಟಿ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರ ವಿಭಾಗೀಯ ಪೀಠದ ಮುಂದೆ ಸರ್ಕಾರ ತನ್ನ ನಿಲುವು ತಿಳಿಸಿದೆ.

ಸರ್ಕಾರದ ಪರವಾಗಿ ಸಲ್ಲಿಸಲಾದ ಲಿಖಿತ ಆಕ್ಷೇಪಣೆಯಲ್ಲಿ, ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಸ್ವಯಂಪ್ರೇರಿತವಾಗಿ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮವಾಗಿದೆ. ಯೋಜನೆಯ ಅನುಷ್ಠಾನವು ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ಅವಲಂಬಿಸಿರುತ್ತದೆ. ಹಣಕಾಸಿನ ಕೊರತೆ ಎದುರಾದಾಗ ಫಲಾನುಭವಿಗಳು ನ್ಯಾಯಾಲಯದ ಮೂಲಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಸರ್ಕಾರದ ಆಕ್ಷೇಪಣೆ ದಾಖಲಿಸಿಕೊಂಡ ಹೈಕೋರ್ಟ್, ಇದಕ್ಕೆ ಪ್ರತ್ಯುತ್ತರ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page