24.5 C
Udupi
Saturday, October 24, 2026
spot_img
spot_img
HomeBlogಹಾಸನಾಂಬೆ ದರ್ಶನೋತ್ಸವಕ್ಕೆ ಸಿದ್ಧತೆ ಚುರುಕು: ವಿವಿಐಪಿ ದರ್ಶನಕ್ಕೆ 2 ಗಂಟೆ ಮಾತ್ರ ಅವಕಾಶ

ಹಾಸನಾಂಬೆ ದರ್ಶನೋತ್ಸವಕ್ಕೆ ಸಿದ್ಧತೆ ಚುರುಕು: ವಿವಿಐಪಿ ದರ್ಶನಕ್ಕೆ 2 ಗಂಟೆ ಮಾತ್ರ ಅವಕಾಶ

ಹಾಸನ: ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಜಿಲ್ಲಾಡಳಿತ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸುಗಮ ಹಾಗೂ ಸುರಕ್ಷಿತ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.

ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ

ಹಾಸನಾಂಬೆ ದರ್ಶನೋತ್ಸವಕ್ಕೆ ಆಗಮಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಡಳಿತ ಆಹ್ವಾನ ನೀಡಿದೆ. ಅಕ್ಟೋಬರ್ 23ರಂದು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಎಸ್ಪಿ ಶುಭನ್ವಿತಾ ಅವರು ಆಹ್ವಾನ ಪತ್ರಿಕೆ ಸಲ್ಲಿಸಿದರು.

ವಿವಿಐಪಿ ದರ್ಶನಕ್ಕೆ ಸಮಯ ನಿಗದಿ

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಶಿವಲಿಂಗೇಗೌಡ, ಕಳೆದ ವರ್ಷ ಸುಮಾರು 25 ಲಕ್ಷ ಭಕ್ತರು ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದರು. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಮಾತ್ರ ವಿವಿಐಪಿಗಳಿಗೆ ದರ್ಶನದ ಅವಕಾಶವಿದ್ದು, ಉಳಿದ ಸಮಯದಲ್ಲಿ ಸಾರ್ವಜನಿಕರು ದೇವಿಯ ದರ್ಶನ ಪಡೆಯಬಹುದು ಎಂದು ತಿಳಿಸಿದರು.

3,500 ವಿವಿಐಪಿಗಳಿಗೆ ವ್ಯವಸ್ಥೆ

ನಿಗದಿತ ಸಮಯದಲ್ಲಿ ದರ್ಶನಕ್ಕೆ ಬಾರದ ವಿವಿಐಪಿಗಳು ಮತ್ತೊಂದು ದಿನ ಬರಬೇಕಾಗುತ್ತದೆ. ಒಟ್ಟು 3,500 ವಿವಿಐಪಿಗಳಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಗಾಗಿ 1,000 ರೂ. ವಿಶೇಷ ಪಾಸ್‌ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಮೈಸೂರು ದಸರಾದಂತಹ ಘಟನೆಗೆ ಅವಕಾಶವಿಲ್ಲ

ಮೈಸೂರು ದಸರಾದಲ್ಲಿ ನಂದಿಧ್ವಜ ಪೂಜೆ ವೇಳೆ ಮೂವರು ಸಚಿವರನ್ನು ಪೊಲೀಸರು ತಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಶಿವಲಿಂಗೇಗೌಡ, ಘಟನೆಯ ಸಂಪೂರ್ಣ ಮಾಹಿತಿ ತಮಗಿಲ್ಲ ಎಂದರು. ಸಚಿವರನ್ನು ತಡೆದಿರುವುದು ತಪ್ಪು ಎಂದು ಅಭಿಪ್ರಾಯಪಟ್ಟ ಅವರು, ಹಾಸನಾಂಬೆ ದರ್ಶನೋತ್ಸವದಲ್ಲಿ ಇಂತಹ ಘಟನೆ ಮರುಕಳಿಸದಂತೆ ವಿವಿಐಪಿ ಹಾಗೂ ಸಾರ್ವಜನಿಕರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
Previous article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page